March 22, 2026

ಹೊಕ್ಕಾಡಿಗೋಳಿಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ಡೆಂಗ್ಯೂ ಜ್ವರದ ಜಾಗೃತಿ ಕಾರ್ಯಕ್ರಮ

0
IMG-20220517-WA0004.jpg

ಬಂಟ್ವಾಳ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ತಳಿರು-ತೋರಣಗಳಿಂದ ಶಾಲೆಯನ್ನು ಅಲಂಕರಿಸಿ ಸಿಂಗರಿಸಲಾಗಿತ್ತು. ಮಕ್ಕಳನ್ನು ಬ್ಯಾಂಡ್ ವಾದನದೊಂದಿಗೆ ಮೆರವಣಿಗೆಯಲ್ಲಿ ಶಾಲೆಗೆ ಸ್ವಾಗತಿಸಲಾಯಿತು. ಸಾಲು ಹಣತೆಗಳನ್ನು ಹಚ್ಚಿ ಕಲಿಕಾ ಚಟುವಟಿಕೆಗಳನ್ನು ಸಾಂಕೇತಿಕವಾಗಿ ಉದ್ಘಾಟಿಸಲಾಯಿತು. ಮಕ್ಕಳಿಗೆ ಪುಸ್ತಕಗಳನ್ನು ಹಂಚಲಾಯಿತು. ಪೋಷಕರ ಸಭೆ ಕೈಗೊಂಡು ಮಳೆಬಿಲ್ಲು, ವಿದ್ಯಾ ಪ್ರವೇಶ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಸಮುದಾಯ ಆರೋಗ್ಯ ಅಧಿಕಾರಿಗಳಾದ ಶ್ರೀ ಕಿರಣ್ ಕುಮಾರ್ ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಮೂಡಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸದಾಶಿವ ಹುಲಿಮೇರು ಅಧ್ಯಕ್ಷ ತೆ ವಹಿಸಿದ್ದರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಘವೇಂದ್ರ ಭಟ್, ಕಾರ್ಯದರ್ಶಿ ಪದ್ಮನಾಭ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ್ ಎಚ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಉಪಾಧ್ಯಕ್ಷರಾದ ಮಮತಾ, ಶಾಲಾ ಶಿಕ್ಷಕರಾದ ಸುಚಿತ್ರಾ, ಮೆಟಿಲ್ಡಾ ಡಿಸೋಜ, ವಿದ್ಯಾ ಪೈ, , ಶಾಹಿದಾ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಸುಮಿತ್ರಾ ಸ್ವಾಗತಿಸಿ ಸಿಲ್ವಿಯಾ ಮಿರಾಂದ ವಂದಿಸಿದರು. ರಾಜೇಶ್ ನೆಲ್ಯಾಡಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

error: Content is protected !!