March 21, 2026

ಭಟ್ಕಳ: ನಾಲ್ಕು ಬೋಟ್ ಗಳು ಮುಳುಗಡೆ

0
n3872217861652804073009d900923f8186dd69a37589e7f97e31bd944f86c2571cd5d68b13942d82956fca.jpg

ಕಾರವಾರ: ಬಂದರಿನಲ್ಲಿ ಲಂಗರು ಹಾಕಿದ್ದ 4 ಬೋಟುಗಳು ಪಲ್ಟಿಯಾಗಿ ಮುಳುಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೀನುಗಾರಿಕೆ ಬಂದರಿನಲ್ಲಿ ನಡೆದಿದೆ.

ಬಂದರು ಪ್ರದೇಶದಲ್ಲಿ ಹೂಳು ತುಂಬಿದ್ದು ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಮತ್ತಷ್ಟು ಹೂಳು ಸಂಗ್ರಹವಾಗಿದ್ದು, ಭಟ್ಕಳದ ದುರ್ಗಾಂಬಿಕಾ ದೇವಿ, ಶ್ರೀ ನಿತ್ಯಾನಂದ, ಜೈನ ಜಟಗಾ, ಗಗನ 3 ಹೆಸರಿನ ಬೋಟುಗಳು ನೀರಿನಲ್ಲಿ ಮುಳುಗಿ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ.

ಮುಳುಗಿದ ಬೋಟುಗಳನ್ನು ಸ್ಥಳೀಯ ಮೀನುಗಾರರ ಸಹಾಯದಿಂದ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಒಂದು ಬೋಟ್ ಅನ್ನು ರಕ್ಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!