August 20, 2026

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಮೃತ್ಯು

0
image_editor_output_image165300738-1652850984149.jpg

ವಿಟ್ಲ: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ನಡೆದಿದೆ.

ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅಳಿಕೆ ನಿವಾಸಿ ಅನ್ವಿತಾ ಎನ್ನಲಾಗಿದೆ.

ಅನ್ವಿತಾ ಜೇಸೀಸ್ ಶಾಲೆಯ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದು, ಇಂದು ಹಠಾತ್ ಆಗಿ ಸಂಭವಿಸಿದ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಅನ್ವಿತಾ ಸಾವನ್ನಪ್ಪಿದ ಕಾರಣ ಜೇಸೀಸ್ ಶಾಲೆಗೆ ರಜೆ ನೀಡಲಾಗಿದೆ.

ಮೃತರು ತಂದೆ-ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!