July 6, 2026

ಗುಜರಾತ್ ಕಾಂಗ್ರೆಸ್ ಘಟಕದಲ್ಲಿನ ಒಳಜಗಳ: ಯುವ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

0
image_editor_output_image-1236165733-1652852107143.jpg

ಹೊಸದಿಲ್ಲಿ: ಗುಜರಾತ್ ಕಾಂಗ್ರೆಸ್ ಘಟಕದಲ್ಲಿನ ಒಳಜಗಳದ ನಡುವೆ ಯುವ ನಾಯಕ ಹಾರ್ದಿಕ್ ಪಟೇಲ್ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಪಟೇಲ್ ಕಾಂಗ್ರೆಸ್ ತೊರೆದಿರುವುದು ಭಾರೀ ಹೊಡೆತವನ್ನು ನೀಡಿದೆ.

“ನಾನು ಇಂದು ಕಾಂಗ್ರೆಸ್ ಪಕ್ಷದ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ಈ ನಿರ್ಧಾರವನ್ನು ನನ್ನೆಲ್ಲಾ ಬೆಂಬಲಿಗರು ಹಾಗೂ ಗುಜರಾತ್ ಜನತೆ ಸ್ವಾಗತ ಮಾಡುತ್ತದೆ ಎಂಬ ಖಾತ್ರಿ ಇದೆ. ನನ್ನ ಈ ಹೆಜ್ಜೆಯಿಂದ ಭವಿಷ್ಯದಲ್ಲಿ ಗುಜರಾತ್ ಗೋಸ್ಕರ ಸಕಾರಾತ್ಮಕ ರೂಪದಲ್ಲಿ ಕಾರ್ಯನಿರ್ವಹಿಸಲ ಸಾಧ್ಯವಾಗುತ್ತದೆ ಎಂದು ನಂಬುತ್ತೇನೆ’’ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದಿರುವ ತಮ್ಮ ರಾಜೀನಾಮೆ ಪತ್ರವನ್ನು ಹಾರ್ದಿಕ್ ಪಟೇಲ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!