July 6, 2026

ಬೈಕ್ ಸ್ಕಿಡ್: ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ ಮೃತ್ಯು

0
image_editor_output_image-847998202-1652853444376.jpg

ಬೈಂದೂರು: ಬೈಕ್ ನಲ್ಲಿ ಹೋಗುವಾಗ ಬೈಕ್ ಸ್ಕಿಡ್ ಆಗಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಕಾಲ್ತೋಡು ಗ್ರಾಮದ ಮುರೂರು ಎಂಬಲ್ಲಿ ಮೇ.17ರಂದು ಸಂಭವಿಸಿದೆ.

ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಶೆಟ್ಟಿ (55) ಮೃತ ಪಟ್ಟ ದುರ್ದೈವಿ.

ಅವರು ಮೇ.17ರಂದು ಬೆಳಗ್ಗೆ ಗ್ರಾಮ ಪಂಚಾಯತ್ ಗೆ ಬಂದು ಮೀಟಿಂಗ್ ಮುಗಿಸಿಕೊಂಡು ಮಧ್ಯಾಹ್ನ ಊಟಕ್ಕೆ ಮುರೂರು ನಲ್ಲಿ ಇರುವ ತಮ್ಮ ಮನೆಗೆ ಬೈಕ್ ನಲ್ಲಿ ಹಿಂಬದಿ ಕುಳಿತು ಕೊಂಡು ಹೋಗುವಾಗ ಆಕಸ್ಮಿಕ ವಾಗಿ ಬೈಕ್ ಸ್ಕಿಡ್ ಆಗಿ ಬಿದ್ದು ಹಿಂಬದಿ ಕುಳಿತ ಇವರು ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿದ್ದು ಅವರನ್ನು ಕುಂದಾಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸಿದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕಾಲ್ತೋಡು ಗ್ರಾಮ ಪಂಚಾಯತ್ ಗೆ ಸದಸ್ಯರಾಗಿ 2ನೇ ಭಾರೀ ಆಯ್ಕೆ ಆಗಿದ್ದು ಅವರು ಪ್ರಸ್ತುತ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು 10ವರ್ಷಗಳ ಕಾಲ ಕಾಲ್ತೋಡು ಭಾಗದಲ್ಲಿ ಆಶಾ ಕಾರ್ಯಕರ್ತೆ ಆಗಿ ಸೇವೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!