July 6, 2026

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎಜಿ ಪೆರಾರಿವಾಲನ್ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

0
image_editor_output_image175835999-1652854476713.jpg

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಅನುಚ್ಛೇದ 142 ಅನ್ನು ಚಲಾಯಿಸುವ ಮೂಲಕ 3೦ ವರ್ಷಕ್ಕಿಂತಲೂ ಅಧಿಕ ವರ್ಷ ಶಿಕ್ಷೆ‌ ಅನುಭವಿಸಿದ ಅಪರಾಧಿಯನ್ನು ಬಿಡುಗಡೆ ಮಾಡುವುದು ಸೂಕ್ತವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಬಿ.ಆರ್.ಬವಾಯಿ ಮತ್ತು ಎ.ಎಸ್.ಬೋಪಣ್ಣ ಸೇರಿದಂತೆ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠವು ಬುಧವಾರ ಈ ತೀರ್ಪನ್ನು ಪ್ರಕಟಿಸಿದೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆರಾರಿವಾಲನ್ 30 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!