ಶೀನಾ ಬೋರಾ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಜಾಮೀನು
ನವದೆಹಲಿ: ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ಇಂದ್ರಾಣಿ ಮುಖರ್ಜಿ ಅವರು ಈಗಾಗಲೇ ಆರುವರೆ ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದಾರೆ. ಪ್ರಕರಣದ ವಿಚಾರಣೆ ಶೀಘ್ರದಲ್ಲೇ ಕೊನೆಗೊಳ್ಳುವುದಿಲ್ಲ. ಹೀಗಾಗಿ, ಅವರಿಗೆ ಜಾಮೀನು ನೀಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಕರಣದ ಮತ್ತೊಬ್ಬ ಆರೋಪಿ ಪೀಟರ್ ಇಂದ್ರಾಣಿ ಮುಖರ್ಜಿ ಫೆಬ್ರುವರಿ 2020 ರಿಂದ ಜಾಮೀನಿನ ಮೇಲಿದ್ದಾರೆ. ಅವರ ಮೇಲೆ ಹೇರಿರುವ ಎಲ್ಲಾ ಷರತ್ತುಗಳೂ ಇಂದ್ರಾಣಿ ಅವರಿಗೂ ಅನ್ವಯವಾಗುತ್ತವೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.





