March 19, 2026

ಉಪ್ಪು ಕಾರ್ಖಾನೆಯ ಗೋಡೆ ಕುಸಿತ: 12 ಕಾರ್ಮಿಕರು ಮೃತ್ಯು

0
image_editor_output_image1494751658-1652866309381.jpg

ಗುಜರಾತ್: ಮೊರ್ಬಿಯ ಹಲ್ವಾಡ್ ಜಿಐಡಿಸಿಯಲ್ಲಿ ಉಪ್ಪು ಕಾರ್ಖಾನೆಯ ಗೋಡೆ ಕುಸಿದು ಕನಿಷ್ಠ 12 ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಹಲ್ವಡ್ ಜಿಐಡಿಸಿಯ ಸಾಗರ್ ಉಪ್ಪಿನ ಕಾರ್ಖಾನೆಯಲ್ಲಿ ಇಂದು ಈ ದುರ್ಘಟನೆ ನಡೆದಿದ್ದು ಸರ್ಕಾರ ಮೃತರ ಕುಟುಂಬಸ್ಥರ ನೆರವಿಗೆ ನಿಲ್ಲಲಿದೆ ಎಂದು ಸಚಿವ ಬ್ರಿಜೇಶ್ ಮೆರ್ಜ ತಿಳಿಸಿದ್ದಾರೆ.

ಮೋರ್ಬಿಯಲ್ಲಿ ಸಂಭವಿಸಿದ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ PMNRF ನಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿಗಳನ್ನು ನೀಡಲಾಗುತ್ತದೆ ಎಂದು ಪ್ರಧಾನ ಮಂತ್ರಿ ಸಚಿವಾಲಯ ತಿಳಿಸಿದೆ.

ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿ ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. “ಗೋಡೆ ಕುಸಿತದಿಂದ ಮೋರ್ಬಿಯಲ್ಲಿ ಸಂಭವಿಸಿದ ದುರಂತವು ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ, ದುಃಖತಪ್ತ ಕುಟುಂಬಗಳಿಗೆ ನೈತಿಕ ಬೆಂಬಲವಾಗಿ ಇರುತ್ತೇವೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!