September 9, 2026

ಬೆಂಗಳೂರು: ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿಗಳ ಹೊಡೆದಾಟ, ವಿಡಿಯೋ ವೈರಲ್

0
image_editor_output_image59450378-1652868263188.jpg

ಬೆಂಗಳೂರು: ನಗರದ ಪ್ರತಿಷ್ಠಿತ ಶಾಲೆಯೊಂದರ ವಿದ್ಯಾರ್ಥಿಗಳು ಶಾಲೆ ಹೊರಗೆ ಕಾದಾಟ ನಡೆಸಿದ್ದು, ಈ ಕುರಿತು ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಶಾಲಾ ಸಮವಸ್ತ್ರದಲ್ಲಿಯೇ ವಿದ್ಯಾರ್ಥಿಗಳ ಎರಡು ಗುಂಪು ಶಾಲೆಯ ಆವರಣದಲ್ಲಿ ಪರಸ್ಪರ ಹಿಂಸಾತ್ಮಕವಾಗಿ ಹಲ್ಲೆ ಹಾಗೂ ನಿಂದನೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಬಿಷಪ್ ಕಾಟನ್ ಬಾಲಕಿಯರ ಶಾಲೆಯ ಹಲವಾರು ವಿದ್ಯಾರ್ಥಿನಿಯರು ಹೊಡೆದಾಡಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ವಿದ್ಯಾರ್ಥಿನಿಯರು  ಪರಸ್ಪರ ಕೂದಲನ್ನು ಎಳೆದಾಡಿಕೊಂಡು ಮತ್ತು ಹಿಂಸಾತ್ಮಕವಾಗಿ ತಳ್ಳಾಡಿಕೊಂಡಿರುವುದು ಕಂಡುಬಂದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *

You may have missed

error: Content is protected !!