ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ ಹೆಚ್ಚಳ
ನವದೆಹಲಿ: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 3.5 ರೂ. ಹೆಚ್ಚಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ರೂ. 1003 ರಷ್ಟಿದೆ.
ಬೆಂಗಳೂರಿನಲ್ಲಿ ಗುರುವಾರ 14.2 ಕೆ.ಜಿ ತೂಕದ ಸಿಲಿಂಡರ್ ದರ ರೂ. 1002.50 ಕ್ಕೆ ಏರಿಕೆ ಆಗಿದೆ. ಬುಧವಾರದವರೆಗೆ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ. 999.50 ರಷ್ಟಿತ್ತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಗೆ ಅನುಗುಣವಾಗಿ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸಿಲಿಂಡರ್ ದರದಲ್ಲಿ ಏರಿಕೆ ಮಾಡಿವೆ.




