ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್. ನಾಗಭೂಷಣ ನಿಧನ

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಸಾಹಿತಿ ಡಿ.ಎಸ್.ನಾಗಭೂಷಣ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಡಿ.ಎಸ್.ನಾಗಭೂಷಣ ಅವರು ಬುಧವಾರ ತಡರಾತ್ರಿ ನಿಧನರಾಗಿದ್ದಾರೆ.
‘ಅನ್ಯಾಯ, ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ದದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಡಿ.ಎಸ್.ನಾಗಭೂಷಣ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ. ಅವರ ಪತ್ನಿ ಮತ್ತು ಗೆಳೆಯರೆಲ್ಲರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.