March 19, 2026

ಮಂಗಳೂರು: ಸ್ಯಾಕ್ಸೋಫೋನ್ ವಾದಕಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image2116166209-1652940798752.jpg

ಮಂಗಳೂರು: ಸ್ಯಾಕ್ಸೋಫೋನ್ ವಾದಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಶಕ್ತಿನಗರದ ಫ್ಲ್ಯಾಟ್ ವೊಂದರಲ್ಲಿ ಬುಧವಾರ ಸಂಭವಿಸಿದೆ.

ಮೃತರನ್ನು ಮೂಲತಃ ಮುಲ್ಕಿಯವರಾದ ಸ್ಯಾಕ್ಸೊಫೋನ್ ವಾದಕಿ ಸುಜಾತಾ ದೇವಾಡಿಗ (29) ಎಂದು ಗುರುತಿಸಲಾಗಿದೆ.

ಸುಜಾತ ಅವರು ಶಕ್ತಿನಗರದ ಫ್ಲ್ಯಾಟ್ ನಲ್ಲಿ ಪತಿ, ತಂದೆ, ತಾಯಿ ಮತ್ತು ಮಗುವಿನೊಂದಿಗೆ ವಾಸವಿದ್ದು , ತಲೆ ನೋವಾಗುತ್ತಿದೆ ಎಂದು ಹೇಳಿ ಕೋಣೆಗೆ ಹೋದವರು ತುಂಬಾ ಹೊತ್ತಾದರೂ ಹೊರಗೆ ಬಂದಿರಲಿಲ್ಲ. ಈ ಸಂದರ್ಭ ಮನೆಯವರು ಕೋಣೆಯಲ್ಲಿ ನೋಡಿದಾಗ ಘಟನೆ ಗೊತ್ತಾಗಿದ್ದು, ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.

ಕಂಕನಾಡಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!