ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಧುಗೆ 1 ವರ್ಷ ಜೈಲು ಶಿಕ್ಷೆ: ಸುಪ್ರೀಂ ಕೋರ್ಟ್ ತೀರ್ಪು

ನವದೆಹಲಿ : ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸೈ ಸಿಧು ಅವರಿಗೆ 35 ವರ್ಷ ಹಿಂದಿನ ‘ರಸ್ತೆ ಅಪಘಾತ’ ಪ್ರಕರಣದಲ್ಲಿ ಗುರುವಾರ ಸುಪ್ರೀಂ ಕೋರ್ಟ್ 1 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.
1988 ರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ನ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್ ಮತ್ತು ಸಂಜಯ್ ಕಿಶನ್ ಕೌಲ್ ಅವರ ದ್ವಿ ಸದಸ್ಯ ಪೀಠವು ಆದೇಶವನ್ನು ನೀಡಿದೆ. ಇದಕ್ಕೂ ಮುನ್ನ ನವಜೋತ್ ಸಿಂಗ್ ಸಿಧು ವಿರುದ್ಧದ ರಸ್ತೆ ಅಪಘಾತ ಪ್ರಕರಣದಲ್ಲಿ ನೋಟಿಸ್ ವ್ಯಾಪ್ತಿಯನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು.
ರಸ್ತೆಯಲ್ಲಿ ನಡೆದ ಹಲ್ಲೆಯಿಂದ ವ್ಯಕ್ತಿಯ ಸಾವು ಸಂಭವಿಸಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸುಪ್ರೀಂ ಕೋರ್ಟ್‌ನ ಹಿಂದಿನ ಆದೇಶವನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ತಮ್ಮ ವಿರುದ್ಧದ ‘ರಸ್ತೆ ಆಕ್ರೋಶ’ ಪ್ರಕರಣದ ವ್ಯಾಪ್ತಿಯನ್ನು ವಿಸ್ತರಿಸುವ ಮನವಿಯನ್ನು ವಿರೋಧಿಸಿದ್ದರು.