ಎಸೆಸೆಲ್ಸಿ ಫಲಿತಾಂಶ: ಹಿಜಾಬ್ ಧರಿಸಿದ ಕಾರಣಕ್ಕಾಗಿ ಶಾಲಾ ಪ್ರವೇಶ ನಿರಾಕರಿಸಲ್ಪಟ್ಟ ವಿದ್ಯಾರ್ಥಿನಿಯರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣ
ಮಡಿಕೇರಿ: ಹಿಜಾಬ್ ಧರಿಸಿದ ಕಾರಣಕ್ಕಾಗಿ ಶಾಲಾ ಪ್ರವೇಶ ನಿರಾಕರಿಸಲ್ಪಟ್ಟ ಎಸ್.ಎಸ್.ಎಲ್.ಸಿ ಯ ಮಡಿಕೇರಿಯ ಎಲ್ಲಾ ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. 18 ವಿದ್ಯಾರ್ಥಿನಿಯರೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ 10 ನೆ ತರಗತಿಯ 18 ವಿದ್ಯಾರ್ಥಿನಿಯರಿಗೆ ಶಿರವಸ್ತ್ರ ಧರಿಸಿದ ಕಾರಣಕ್ಕಾಗಿ ಫೆಬ್ರವರಿ 14 ರಿಂದ ಶಾಲಾ ಪ್ರವೇಶ ನಿರಾಕರಿಸಲಾಗಿತ್ತು.




