March 25, 2026

ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ: ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

0
image_editor_output_image1832567273-1653023142537.jpg

ಹುಣಸೂರು : ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣನಾದ ವಿದ್ಯಾರ್ಥಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ತಾಲೂಕಿನ ಬೂತಾಳೆ ಪೆಂಜಹಳ್ಳಿಯಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ನಾಗಾಪುರ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿ ಬೂತಾಳೆ ಪೆಂಜಹಳ್ಳಿಯ ವಿಜಯ್ ರ ಪುತ್ರ ಸಂಜಯ್ ಆತ್ಮಹತ್ಯೆಗೆ ಶರಣಾದಾತ.

ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ,ಪರೀಕ್ಷೆಯಲ್ಲಿ ಇಂಗ್ಲಿಷ್ ಸಮಾಜ ವಿಷಯದಲ್ಲಿ ಅನುತ್ತೀರ್ಣ ಗೊಂಡಿರುವ ಹಿನ್ನೆಲೆಯಲ್ಲಿ ಮನನೊಂದು ತಮ್ಮ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ.

ಸಂಜಯ್ ತಂದೆ-ತಾಯಿ ಇಂದು ಬೆಳಿಗ್ಗೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಮನೆಯಲ್ಲಿ ಬಂದು ನೋಡಿದಾಗ ಸಂಜಯ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!