March 25, 2026

ತಾಂತ್ರಿಕ ದೋಷ: ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾದ ವಿಮಾನ ಭೂಸ್ಪರ್ಶ

0
image_editor_output_image-1555193151-1653036974901.jpg

ನವದೆಹಲಿ: ಬೆಂಗಳೂರಿಗೆ ಹೊರಟಿದ್ದ ಟಾಟಾ ಗ್ರೂಪ್‌ನ ಏರ್ ಇಂಡಿಯಾದ ಎ320ನಿಯೊ ವಿಮಾನವು ಟೇಕ್ ಆಫ್ ಆದ ಕೇವಲ 27 ನಿಮಿಷಗಳ ನಂತರ ತಾಂತ್ರಿಕ ದೋಷದಿಂದ ಮುಂಬೈ ವಿಮಾನನಿಲ್ದಾಣಕ್ಕೆ ಮರಳಿರುವ ಘಟನೆ ಗುರುವಾರ ನಡೆದಿದೆ.

ವಿಮಾನದ ಎಂಜಿನ್‌ಗಳ ಪೈಕಿ ಒಂದು ಎಂಜಿನ್ ಅನ್ನು ತಾಂತ್ರಿಕ ದೋಷದಿಂದಾಗಿ ಆಗಸದಲ್ಲೇ ಸ್ಥಗಿತಗೊಳಿಸಲಾಗಿತ್ತು ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಪರ್ಯಾಯ ವಿಮಾನದ ಮೂಲಕ ಪ್ರಯಾಣಿಕರನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ಘಟನೆ ಕುರಿತಂತೆ, ನಾಗರಿಕ ವಿಮಾನಯಾನ ನಿರ್ದೇಶನಾಲಯವು ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಬೆಳಿಗ್ಗೆ 9.43ಕ್ಕೆ ವಿಮಾನವು ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ನಿಮಿಷಗಳ ನಂತರ ಇಂಜಿನ್‌ಗಳಲ್ಲಿ ಹೆಚ್ಚಿನ ತಾಪಮಾನದ ಬಗ್ಗೆ ಪೈಲಟ್‌ಗಳಿಗೆ ಎಚ್ಚರಿಕೆ ಸಂದೇಶ ಬಂದಿದೆ. ಬಳಿಕ ಒಂದು ಎಂಜಿನ್ ಸ್ಥಗಿತಗೊಳಿಸಿದ ಪೈಲಟ್‌, ವಿಮಾನವನ್ನು ಬೆಳಿಗ್ಗೆ 10.10ರ ಸುಮಾರಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!