July 6, 2026

ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ‘ಶಿವಲಿಂಗ’ ಪತ್ತೆ ಕುರಿತಾಗಿ ಆಕ್ಷೇಪಾರ್ಹ ಪೋಸ್ಟ್: ಪ್ರಾಧ್ಯಾಪಕನ ಬಂಧನ

0
image_editor_output_image406702740-1653113725921.jpg

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ‘ಶಿವಲಿಂಗ’ ಪತ್ತೆಯಾಗಿದೆ ಎಂಬ ಕುರಿತಾಗಿ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ.

ಭಾರತೀಯ ದಂಡ ಸಂಹಿತೆ 153ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಮೇಲೆ ದುಷ್ಪರಿಣಾಮ ಬೀರುವ ಕೃತ್ಯಗಳು) ಮತ್ತು 295ಎ (ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧಾರ್ಮಿಕ ಭಾವನೆಗಳು, ಧರ್ಮವನ್ನು ಅವಮಾನಿಸುವ ಕೃತ್ಯ) ಅಡಿಯಲ್ಲಿ ಲಾಲ್ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿಯ ಉತ್ತರ ಸೈಬರ್ ಪೊಲೀಸರು ತಿಳಿಸಿದ್ದಾರೆ.

ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ರಾತ್ರಿ ಲಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!