ಉಡುಪಿಯ ಯುವಕನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಮಹಿಳೆ
ಉಡುಪಿ: ಮಹಿಳೆಯೋರ್ವಳು ಉಡುಪಿ ಮೂಲದ ಯುವಕನೊಬ್ಬನ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆಯಲ್ಲಿ ನೆಲೆಸಿರುವ ಉಡುಪಿ ಮೂಲದ ಅಶೋಕ್ ಶೆಟ್ಟಿ ಅವರು ಕೆಲ ದಿನಗಳ ಹಿಂದೆ ಲೂಡೋ ಆಪ್‌ನ್ನು ಡೌನ್ಲೋಡ್ ಮಾಡಿಕೊಂಡಿದ್ದರು. ಸ್ವಲ್ಪ ದಿನಗಳ ಬಳಿಕ ಮಹಿಳೆಯೋರ್ವಳು ಕರೆ ಮಾಡಿ ಅವರೊಂದಿಗೆ ಮಾತನಾಡಿದ್ದಳು.
ಬಳಿಕ ಅಶೋಕ್ ಅವರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ 25, 000 ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಳು. ಆದರೆ ಅಶೋಕ್ ಆಕೆಯ ಬೇಡಿಕೆಯನ್ನು ತಿರಸ್ಕರಿಸಿದಾಗ ಆಕೆ ಕೆಲವು ವಾಟ್ಸಾಪ್ ಗ್ರೂಪ್‌ಗಳಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾಳೆ.
ಸಂತ್ರಸ್ತ ಅಶೋಕ್ ಈ ಸಂಬಂಧ ಬಾಗಲಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.




