March 25, 2026

ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ

0
image_editor_output_image-1745209604-1653131140714

ಬಂಟ್ವಾಳ: ಇಲ್ಲಿನ ತಾಲೂಕಿನ ಪಾಣೆಮಂಗಳೂರು ಸಮೀಪದ ಗೂಡಿನಬಳಿ ಸಮೀಪ ನೇತ್ರಾವತಿ ನದಿಗೆ ಹಾರಿ ವೃದ್ದೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೂಡಿನಬಳಿ ಹಳೆ ನೇತ್ರಾವತಿ ಸೇತುವೆ ಸಮೀಪ ಈ ಕೃತ್ಯ ನಡೆದಿದ್ದು, ಸ್ಥಳೀಯ ಈಜುಪಟು ಯುವಕರು ತಕ್ಷಣ ಕಾರ್ಯಪ್ರವೃತ್ತರಾಗಿ ಮಹಿಳೆಯನ್ನು ನೀರಿನಿಂದ ಮೇಲಕ್ಕೆತ್ತಿದ್ದರಾದರೂ ಅದಾಗಲೇ ಮಹಿಳೆ ಮೃತಪಟ್ಟಿದ್ದಾರೆ. ಬಂಟ್ವಾಳ ದೇವಸ್ಥಾನದ ಸಮೀಪದ ನಿವಾಸಿ ಮಹಿಳೆ ಎನ್ನಲಾಗಿದ್ದು, ಸುಮಾರು 60 ವರ್ಷ ಪ್ರಾಯದವರಾಗಿದ್ದಾರೆ. ಯಾವ ಕಾರಣಕ್ಕೆ ಈ ಕೃತ್ಯಕ್ಕೆ ಮುಂದಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದಷ್ಟೆ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!