ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿಹೋಗಿದ್ದ ಜನತಗೆ ಶನಿವಾರ ಸಂತಸದ ಸುದ್ದಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೀಡಿದ್ದಾರೆ.
ಪೆಟ್ರೋಲ್ ಮೇಲಿನ 8 ರೂಪಾಯಿ ತೆರಿಗೆ ಮತ್ತು ಡೀಸೆಲ್ ಮೇಲಿನ 6 ರೂಪಾಯಿ ಅಬಕಾರಿ ಸುಂಕವನ್ನು ಇಳಿಕೆ ಮಾಡಲಾಗಿದೆ.
ಈ ಮೂಲಕ ಪೆಟ್ರೋಲ್ ಬೆಲೆ ದೇಶಾದ್ಯಂತ ರೂ. 9.50 ಮತ್ತು ಡೀಸೆಲ್ ಬೆಲೆ ರೂ. 7 ಕಡಿಮೆಯಾಗಲಿದೆ.
ದಿನಬಳಕೆ ವಸ್ತುಗಳು, ಹಣ್ಣು – ತರಕಾರಿ, ಸೋಪು, ಶಾಂಪೂ ಸೇರಿದಂತೆ ಎಲ್ಲಾ ವಸ್ತುಗಳ ಬೆಲೆಯೂ ಗಗನಕ್ಕೇರಿದ್ದು, ಈ ಬೆಲೆ ಇಳಿಕೆಯ ನಿರ್ಧಾರದಿಂದ ಜನಸಾಮಾನ್ಯರಿಗೆ ದೊಡ್ಡಮಟ್ಟದ ಸಹಾಯವಾಗಲಿದೆ.





