March 25, 2026

ಬ್ಯಾಟರಿ ಸೆಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ಮೂವರ ಮೃತ್ಯು

0
Fire.jpeg

ಹರ್ಯಾಣ: ಫರಿದಾಬಾದ್‌ನಲ್ಲಿ ವಾಹನಗಳಿಗೆ ಬಳಸುವ ಲೀಥಿಯಂ ಬ್ಯಾಟರಿ ಸೆಲ್‌ಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತರನ್ನು ದೆಹಲಿಯ ಲಾಲ್‌ ಕೌನ್ ನಿವಾಸಿಗಳಾದ ಸತ್ಬೀರ್ (27), ಸುನೀಲ್‌ (22) ಹಾಗೂ ಅಂಕಿತ್ (23) ಎಂದು ಗುರುತಿಸಲಾಗಿದೆ. ಇವರು ಕೆಲವು ದಿನಗಳಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

ಘಟನೆ ಕುರಿತು ಮಾಹಿತಿ ರವಾನೆಯಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಒಂದು ಗಂಟೆಯಲ್ಲಿ ಬೆಂಕಿ ನಂದಿಸಲು ಯಶಸ್ವಿಯಾಗಿದ್ದಾರೆ ಎಂದು ಫರಿದಾಬಾದ್ ಅಗ್ನಿಶಾಮಕ ದಳದ ಎಡಿಎಫ್‌ಒ ಸತ್ಯವಾನ್ ಮಾಹಿತಿ ನೀಡಿದರು.

ಪ್ರಾಥಮಿಕ ತನಿಖೆಯ ಪ್ರಕಾರ ಮೊದಲು ನೆಲಮಹಡಿಯಲ್ಲಿ ಬೆಂಕಿ ಹತ್ತಿಕೊಂಡಿದೆ. ನಂತರ ಅದು ಮೊದಲನೇ ಅಂತಸ್ತಿಗೆ ವ್ಯಾಪಿಸಿದೆ. ಬ್ಯಾಟರಿಗಳಿಂದ ಹೊರಹೊಮ್ಮಿದ ವಿಷ ಅನಿಲ ಸೇವಿಸಿ ಉಸಿರುಗಟ್ಟಿ ಮೂವರು ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!