May 20, 2026

ಧರ್ಮಸ್ಥಳ: ರಸ್ತೆಯಲ್ಲಿ ನರಳಾಡುತ್ತಿದ್ದ ಅಪರಿಚಿತ ವ್ಯಕ್ತಿ – ಆಸ್ಪತ್ರೆ ಸಾಗಿಸುವ ವೇಳೆ ಮೃತ್ಯು

0
image_editor_output_image-325538438-1653230394201

ಬೆಳ್ತಂಗಡಿ : ವ್ಯಕ್ತಿಯೊಬ್ಬರು ವಿಷ ಸೇವಿಸಿ ಸಾವನ್ನಪ್ಪಿರುವ ಘಟನೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಹಳೆ ಸೇತುವೆ ಬಳಿ ನಡೆದಿದೆ.

ಅದಿತ್ಯವಾರ ಬೆಳಗ್ಗೆ ಧರ್ಮಸ್ಥಳದ ನೇತ್ರಾವತಿ ಹಳೆ ಸೇತುವೆ ಬಳಿ ರಸ್ತೆ ಬದಿ 50 ರಿಂದ 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ನರಳಾಡುತ್ತಿದ್ದು ವ್ಯಕ್ತಿಯ ಬಾಯಿಯಿಂದ ನೊರೆ ಬರುತ್ತಿದ್ದನ್ನು ಗಮನಿಸಿದ ಸ್ಥಳೀಯರೊಬ್ಬರು ಆಂಬ್ಯುಲೆನ್ಸ್ ನಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ದೊರೆತ್ತಿಲ್ಲ.

ಸದ್ಯ ಪ್ರಕರಣದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!