May 20, 2026

ಉಪ್ಪಳ: ಕಾರು ಮತ್ತು ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು

0
IMG-20220522-WA0128.jpg

ಉಪ್ಪಳ: ಕಾರು-ಬೈಕ್ ಢಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಉಪ್ಪಳ ತುರುತಿಯ ಮೂಸಾ ಮತ್ತು ಜೈನಾಬ್ ದಂಪತಿಯ ಪುತ್ರ ಅಬೂಬಕ್ಕರ್ ಇಶಾನ್ (19) ಎಂದು ಗುರುತಿಸಲಾಗಿದೆ.

ಉಪ್ಪಳ ಹಿದಾಯತ್ ನಗರ ಶೇಖ್ ಅಹಮದ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ 7.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಇಶಾನ್ ಪ್ರಯಾಣಿಸುತ್ತಿದ್ದ ಬೈಕ್ ಎದುರುಗಡೆಯಿಂದ ಬರುತ್ತಿದ್ದ ಮಾರುತಿ ಬ್ರೆಝಾ ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಳೆದ 12ನೇ ತರಗತಿಯ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!