ವಿಟ್ಲ: ಎಲೆಕ್ಟ್ರಾನಿಕ್ ವಸ್ತುಗಳ ಸಾಗಾಟದ ಆಪೆ ರಿಕ್ಷಾ ಪಲ್ಟಿ: ಚಾಲಕನಿಗೆ ಗಾಯ

ವಿಟ್ಲ: ಲಾರಿ ಮತ್ತು ಆಪೆ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಪೆ ರಿಕ್ಷಾ ರಸ್ತೆಗೆ ಉರುಳಿ ಬಿದ್ದ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಾಣಿಯ ಕುಲಾಲು ಭವನ ಮುಂಭಾಗ ಸಂಭವಿಸಿದೆ.
ಪುತ್ತೂರು ಕಡೆಯಿಂದ ಕೋಳಿಗಳ ಆಹಾರ ಸರಬರಾಜು ಮಾಡುತ್ತಿದ್ದ ಈಚರ್ ಲಾರಿ ಎದುರಿನಿಂದ ಹೋಗುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡುವ ವೇಳೆ ಮುಂಭಾಗದಲ್ಲಿ ತೆರಳುತ್ತಿದ್ದ ಆಪೆ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಆಪೆ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾನೆ.
ಆಪೆ ರಿಕ್ಷಾದಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳಿದ್ದು, ಸಂಪೂರ್ಣವಾಗಿ ಹಾನಿಗೊಂಡಿದೆ ಎಂದು ಪ್ರತ್ಯಕ್ಷಿದರ್ಶಿಗಳು ತಿಳಿಸಿದ್ದಾರೆ.
