ಐಪಿಎಲ್ 2022: ಗುಜರಾತ್ vs ರಾಜಸ್ಥಾನ ನಡುವೆ ಮೊದಲ ಕ್ವಾಲಿಫೈಯರ್ ಪಂದ್ಯ
ಕೋಲ್ಕತ್ತಾ: ಐಪಿಎಲ್ 2022 ಆವೃತ್ತಿಯ ಮೊದಲ ಕ್ವಾಲಿಫೈಯರ್ ಪಂದ್ಯ ಮಂಗಳವಾರ ನಡೆಯಲಿದೆ. ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಸಂಜೆ 7-30ಕ್ಕೆ ಪಂದ್ಯ ಆರಂಭವಾಗಲಿದ್ದು, ಹೈವೊಲ್ಟೇಜ್ ಪಂದ್ಯದಲ್ಲಿ ಉಭಯ ತಂಡಗಳು ಮುಂದಿನ ಹಂತ ಪ್ರವೇಶಿಸಲು ತೀವ್ರ ಪೈಪೋಟಿ ನಡೆಸಲಿವೆ.
ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡ ಆಡಿದ 14 ಪಂದ್ಯಗಳ ಪೈಕಿ 10 ಗೆಲುವು ಸಾಧಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಳಅಳುವ ಮೂಲಕ ಈ ಬಾರಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.
ರಾಜಸ್ಥಾನ್ ರಾಯಲ್ಸ್ ಮತ್ತೊಮ್ಮೆ ಐಪಿಎಲ್ ಟ್ರೋಫಿ ಎತ್ತಿಹಿಡಿಯುವ ಕನಸು ಕಾಣುತ್ತಿದೆ. ಆಡಿದ 14 ಪಂದ್ಯಗಳ ಪೈಕಿ 9 ಗೆಲುವು ಸಾಧಿಸಿದ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ 2ನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಬಲಿಷ್ಠವಾಗಿರುವ ಈ ತಂಡ ಟ್ರೋಫಿ ಮೇಲೆ ಕಣ್ಣಿಟ್ಟಿದೆ.





