ಬ್ಯಾಂಕ್ ಖಾತೆ ದುರ್ಬಳಕೆ ಆರೋಪ: ಪತಿ, ಮಾವನ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ನಟಿ
ಮೈಸೂರು: ಬ್ಯಾಂಕ್ ಖಾತೆ ದುರ್ಬಳಕೆ ಆರೋಪ ಹೊರಿಸಿ ನಟಿ ಚೈತ್ರಾ ಬಿ ಪೋತರಾಜ್ ತನ್ನ ಪತಿ ಮತ್ತು ಮಾವನ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಮೈಸೂರಿನ ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನ್ನ ಅನುಮತಿಯಿಲ್ಲದೆ ಗೋಲ್ಡ್ ಲೋನ್ ಪಡೆಯಲಾಗಿದೆ ಎಂದು ಪತಿ ಬಾಲಾಜಿ ಪೋತರಾಜ್, ಮಾವ ಪೋತರಾಜ್ ವಿರುದ್ಧ ಚೈತ್ರಾ ದೂರು ನೀಡಿದ್ದಾರೆ. ಗೋಲ್ಡ್ ಲೋನ್ ಪಡೆಯುವ ವೇಳೆ ತನ್ನ ಸಹಿಯನ್ನು ನಕಲು (ಫೋರ್ಜರಿ) ಮಾಡಲಾಗಿದೆ.
ಈ ಅವ್ಯವಹಾರದಲ್ಲಿ ಬ್ಯಾಂಕ್ ಮ್ಯಾನೇಜರ್ ಕೂಡ ಶಾಮೀಲಾಗಿದ್ದಾರೆ. ಪ್ರಕರಣ ಸಂಬಂಧ ತಮಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು ಅವರು ಮೂರು ದಿನಗಳ ಹಿಂದೆಯೇ ದೂರು ನೀಡಿದ್ದಾರೆ. ಈ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.





