ವಿಧಾನ ಪರಿಷತ್ ಚುನಾವಣೆ: ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಟಿಕೆಟ್: ಬಿ.ವೈ.ವಿಜಯೇಂದ್ರಗೆ ಟಿಕೆಟ್ ನಿರಾಕರಣೆ
ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಅಧಿಕೃತವಾಗಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಟಿಕೆಟ್ ನಿರಾಕರಿಸಲಾಗಿದ್ದು, ಮಾಜಿ ಡಿಸಿಎಂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ.
ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳಾಗಿ ಲಕ್ಷ್ಮಣ ಸವದಿ, ಹೇಮಲತಾ ನಾಯಕ್, ಕೇಶವ ಪ್ರಸಾದ್ ಮತ್ತು ಚಲವಾದಿ ನಾರಾಯಣ ಸ್ವಾಮಿಗೆ ಟಿಕೆಟ್ ಅಂತಿಮ ಮಾಡಲಾಗಿದೆ.





