ಕರ್ನಾಟಕ ರಕ್ಷಣಾವೇದಿಕೆ ಸ್ವಾಭಿಮಾನಿ ಬಣ ರಾಜ್ಯಾಧ್ಯಕ್ಷ ಕೃಷ್ಣೇಗೌಡ್ರು ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಹ್ಮಣ್ಯ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯ ಅಧ್ಯಕ್ಷ ಪಿ ಕೃಷ್ಣೇಗೌಡರು ಇಂದು ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ ರಾಜ್ಯಾಧ್ಯಕ್ಷರನ್ನು ಸ್ವಾಗತಿಸಿ ಬರಮಾಡಿಕೊಂಡರು.
ಮಾಧ್ಯಮದ ಜೊತೆ ಮಾತನಾಡಿದ ಕೃಷ್ಣೇಗೌಡರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಅಭಿಲಾಷೆ ಹಲವಾರು ದಿನಗಳಿಂದ ಇತ್ತು. ಮತ್ತು ಈ ಭಾಗದ ಸಂಘಟನೆಯ ಕಾರ್ಯಕರ್ತರು ಗಳನ್ನು, ಮುಖಂಡರುಗಳನ್ನು ಭೇಟಿ ಮಾಡಿ ಸಂಘಟನಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಚರ್ಚೆ ಮಾಡಬೇಕಾಗಿತ್ತು. ಈ ಎಲ್ಲಾ ಕಾರಣದಿಂದ ಇಂದು ಸುಬ್ರಹ್ಮಣ್ಯಕ್ಕೆ ಬಂದಿದ್ದೇವೆ.
ಮೇಕೆದಾಟು ಯೋಜನೆ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಅವರು
ರಾಜ್ಯ ಸರಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ, ಮುಂದಿನ ದಿನಗಳಲ್ಲಿ ನಮ್ಮ ಮುಖ್ಯಮಂತ್ರಿಯೊಂದಿಗೆ ಮಾತನಾಡಿ ಮೇಕೆದಾಟು ಯೋಜನೆಯ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಲಾಗುವುದು. ಇಲ್ಲದಿದ್ದಲ್ಲಿ ರಾಜ್ಯದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಕಳೆದ ಹದಿನೈದು ದಿನಗಳ ಹಿಂದೆ ಮೇಕೆದಾಟು ವಿನಿಂದ ಕನಕಪುರದ ವರೆಗೆ ಸುಮಾರು 35 ಕಿಲೋಮೀಟರ್ ಪಾದಯಾತ್ರೆಯನ್ನು ಮಾಡಿ ನಮ್ಮ ಹೋರಾಟದ ಬಗ್ಗೆ ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದೆವು ಎಂದು ಹೇಳಿದರು. ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ಸುಳ್ಯ ತಾಲೂಕುಗಳಲ್ಲಿ ಸಂಘಟನೆಯನ್ನು ಬೆಳೆಸುವಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಭು ಬೆಂಗಳೂರು, ಕಡಬ ಮಾಜೀ ಜಿಲ್ಲಾಪರಿಷತ್ ಸದಸ್ಯರು ಹಾಗು ಕರ್ನಾಟಕ ರಕ್ಷಣಾವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯದರ್ಶಿ ಸೈಯದ್ ಮೀರಾ ಸಾಹೇಬ್, ಸುಬ್ರಹ್ಮಣ್ಯ ವಲಯ ಅಧ್ಯಕ್ಷ ಜಗದೀಶ ಪಡ್ಪು, ಅಂಬೇಡ್ಕರ್ ರಕ್ಷಣಾವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ, ಕೊಡಗು ಜಿಲ್ಲಾ ಮಾಧ್ಯಮ ವಕ್ತಾರ ಸತೀಶ್ ಹೊದ್ದೆಟ್ಟಿ, ಬೆಂಗಳೂರು ನಗರ ಕಾರ್ಮಿಕರ ಘಟಕ ರಾಮಚಂದ್ರ, ತ್ಯಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.