September 26, 2026

ಸಿಂಗೋನಹಳ್ಳಿ ಸೇತುವೆ ಬಳಿ ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವ ಗಂಭೀರ

0
image_editor_output_image656694607-1653456644850.jpg

ತುಮಕೂರು: ಗುಬ್ಬಿ ಪಟ್ಟಣದ ಹೊರವಲಯದ ಸಿಂಗೋನಹಳ್ಳಿ ಸೇತುವೆ ಬಳಿ ಬುಧವಾರ ಬೆಳಿಗ್ಗೆ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕೋಳಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಬಂದ ಪೊಲೀಸರು ವಾಹನ ತೆರವುಗೊಳಿಸಿದರು.

 

Leave a Reply

Your email address will not be published. Required fields are marked *

You may have missed

error: Content is protected !!