ಸುಳ್ಯ: ರಕ್ಷಿತಾರಣ್ಯದಲ್ಲಿ ಮರಕ್ಕೆ ನೇಣು ಬಿಗಿದು ವೃದ್ಧ ಆತ್ಮಹತ್ಯೆ
ಸುಳ್ಯ: ಬೇಗ ಮಲೆ ರಕ್ಷಿತಾರಣ್ಯದಲ್ಲಿ ಸುಳ್ಯ ತಾಲೂಕಿನ ಕಳಂಜ ಗ್ರಾಮದ ವೃದ್ಧ ವ್ಯಕ್ತಿಯೋರ್ವರು ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ಸುಳ್ಯದಿಂದ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಕಳೆಂಜ ಗ್ರಾಮದ ನಾಗಪ್ಪ 60 ವರ್ಷ ಎಂದು ಗುರುತಿಸಲಾಗಿದೆ.
ಇವರು ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಇಂದು ಮಧ್ಯಾಹ್ನ ಸುಳ್ಯ ಕಡೆಯಿಂದ ನಡೆದುಕೊಂಡು ಬರುತ್ತಿದ್ದದನ್ನು ಸ್ಥಳೀಯರೂ ಗಮನಿಸಿದ್ದಾರೆ ಎನ್ನಲಾಗಿದೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಸುಳ್ಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.





