December 15, 2025

ವಿಟ್ಲ: ಗಣಿಗಾರಿಕೆ ನಿಲ್ಲಿಸಿ, ಸುಳ್ಳಮಲೆ ಗುಹಾತೀರ್ಥ ಉಳಿಸಿ ಬೃಹತ್ ಪ್ರತಿಭಟನೆ: ಧರ್ಮದ ಬಗ್ಗೆ ಮಾತನಾಡುವವರು ಸುಳ್ಳಮಲೆಯಲ್ಲಿ ನಾಸ್ತಿಕರಂತೆ ವರ್ತನೆ: ಮಾಜಿ ರಮಾನಾಥ ರೈ

0
image_editor_output_image-452550998-1653474033752.jpg

ವಿಟ್ಲ: ಅನಂತಾಡಿ ಗೋಳಿಕಟ್ಟೆಯಲ್ಲಿ ತುಂಬೆಕೋಡಿ ಗಣಿಗಾರಿಕೆಯ ವಿರುದ್ಧ ಮಾಣಿ ಮತ್ತು ಅನಂತಾಡಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಗಣಿಗಾರಿಕೆ ನಿಲ್ಲಿಸಿ, ಸುಳ್ಳಮಲೆ ಗುಹಾತೀರ್ಥ ಉಳಿಸಿ ಬೃಹತ್ ಪ್ರತಿಭಟನೆ ನಡೆಯಿತು.

ಮಾಜಿ ಬಿ ರಮಾನಾಥ ರೈ ಮಾತನಾಡಿ ಧರ್ಮದ ಬಗ್ಗೆ ಮಾತನಾಡುವವರು ಸುಳ್ಳಮಲೆಯಲ್ಲಿ ನಾಸ್ತಿಕರಂತೆ ವರ್ತಿಸುತ್ತಿದ್ದಾರೆ. ರಾಜಕೀಯದ ದೃಷ್ಟಿಯಿಂದ ಮಾತ್ರ ಧರ್ಮದ ವಿಚಾರ ಮಾತನಾಡುತ್ತಾರೆಂಬುದಕ್ಕೆ ಸುಳ್ಳಮಲೆ ನಿದರ್ಶನವಾಗಿದೆ. ಜಲಸನ್ನಿಧಿ ಹಾಗೂ ನಾಗಸಾನಿಧ್ಯ ಇರುವಲ್ಲಿ ಯಾವುದೇ ಸ್ಪೋಟಕಗಳನ್ನು ಬಳಸಬಾರದು. ಸಾನಿಧ್ಯ ಉಳಿಸುವ ನಿಟ್ಟಿನಲ್ಲಿ ಯಾವ ಅಷ್ಟಮಂಗಲದ ಅವಶ್ಯಕತೆಯೂ ಇಲ್ಲ ಎಂದು ಹೇಳಿದರು.

ಒಂದು ಎಕ್ರೆ ಗಣಿಗಾರಿಕೆಗೆ ಅನುಮತಿ ಪಡೆದುಕೊಂಡು ಮೂರು ಎಕ್ರೆಯಲ್ಲಿ ಕೋರೆ ನಡೆಸಲಾಗುತ್ತಿದೆ. ಗಣಿಗಾರಿಕೆಯ ಪ್ರದೇಶದಿಂದ ಗುಹಾ ತೀರ್ಥದಿಂದ 50ಮೀರಟರ್ ದೂರ ಹಾಗೂ 300ಮೀಟರ್ ದೂರದಲ್ಲಿ ಉಳ್ಳಾಲ್ತಿ ಕ್ಷೇತ್ರವಿದೆ. ಆದರೂ ಅನಂತಾಡಿ ಪಂಚಾಯಿತಿ ಗಣೆಯನ್ನು ನಿಲ್ಲಿಸುವ ಕಾರ್ಯಕ್ಕೆ ಮುಂದಾಗುತ್ತಿಲ್ಲ. ಜನರ ಮನಸ್ಸಿನಲ್ಲಿರುವ ಬೇನೆಯನ್ನು ಶಮನ ಮಾಡುವ ನಿಟ್ಟಿನಲ್ಲಿ ಈ ಆಂದೋಲನ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಮಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ಎಸ್. ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ ಜೈನ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಉಮಾನಾಥ ಶೆಟ್ಟಿ ಪೆರ್ನೆ, ತಾ.ಪಂ.ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ ಕುಶಲ ಎಂ.ಪೆರಾಜೆ,

ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ
ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಕೆಪಿಸಿಸಿ ಸಂಯೋಜಕ ಚಿತ್ತರಂಜನ್, ಕೆಪಿಸಿಸಿ ಮಹಿಳಾ ವಿಭಾಗದ ಕಾರ್ಯದರ್ಶಿ ಮಲ್ಲಿಕಾ ಪಕ್ಕಳ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿಕುಂದರ್,
ಪಾಣೆಮಂಗಳೂರು ಬ್ಲಾಕ್ ಮಹಿಳಾ ಅಧ್ಯಕ್ಷೆ ಜಯಂತಿ ಪೂಜಾರಿ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮನಾಥ ವಿಟ್ಲ, ತಾ.ಪಂ.ಮಾಜಿ ಸ್ಥಯಿ ಸಮಿತಿ ಅಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ, ಬಂಟ್ವಾಳ ತಾ.ಪಂ.ಮಾಜಿ ಉಪಾಧ್ಯಕ್ಷೆ ಕಾಂಚಲಾಕ್ಷಿ, ಬಂಟ್ವಾಳ ಪುರಸಭಾ ಸದಸ್ಯ ಜನಾರ್ಧನ ಚೆಂಡ್ತಿಮಾರು, ಬೇಬಿ ಕುಂದರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!