ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 10 ಮಂದಿ ಆರೋಪಿಗಳ ಬಂಧನ
ರಾಮನಗರ: ಜಿಲ್ಲೆಯಲ್ಲಿ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ, ಇಂದು ಮಾಗಡಿ ಪೊಲೀಸರು 10 ಆರೋಪಿಗಳನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎಸ್ ಎಸ್ ಎಲ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ರಾಮನಗರ ಜಿಲ್ಲೆಯ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದಂತ ಪೊಲೀಸರು, ಇಂದು ಮಾಗಡಿ ಕೆಂಪೇಗೌಡ ಶಾಲೆಯ ಪ್ರಿನ್ಸಿಪಾಲ್ ಶ್ರೀನಿವಾಸ್, ಕ್ಲರ್ಕ್ ರಂಗೇಗೌಡ, ಶಿಕ್ಷಕರಾದಂತ ನಾಗರಾಜ್, ಅಲೀಂ, ಲೋಕೇಶ್ ಸುಬ್ರಹ್ಮಣ್ಯ ಹಾಗೂ ಪತ್ರಕರ್ತ ವಿಜಯ್ ಎಂಬುವರು ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ.
ಮಾರ್ಚ್/ಏಪ್ರಿಲ್ ನಲ್ಲಿ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯೊಂದು ಸೋರಿಕೆಯಾಗಿತ್ತು. ಈ ಸಂಬಂಧ ಶಿಕ್ಷಣ ಇಲಾಖೆಯಿಂದ ಮಾಗಡಿ ಠಾಣೆಗೆ ದೂರು ನೀಡಲಾಗಿತ್ತು. ಈ ದೂರು ಆಧರಿಸಿ ಇದೀಗ ಮಾಗಡಿ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ.





