ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ
ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಕಾರ್ ಸುಟ್ಟು ಭಸ್ಮವಾದ ಘಟನೆ ಮಂಗಳೂರು ನಗರದ ಪಿ.ವಿ.ಎಸ್ ಸರ್ಕಲ್‌ನಲ್ಲಿ ಬಳಿ ನಡೆದಿದೆ.
ಘಟನೆಯ ವೇಳೆ ಕಾರಿನಲ್ಲಿ ಚಾಲಕ ಸಹಿತ ಇಬ್ಬರಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು.
ಕಾರಿನ ಮುಂಭಾಗ ಭಾಗಶಃ ಸುಟ್ಟು ಹೋಗಿದೆ. ಬ್ಯಾಟರಿ ಬಳಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿರಬೇಕು ಎಂದು ಶಂಕಿಸಲಾಗಿದೆ.





