March 25, 2026

ಮಣಿಪಾಲ: ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೈಕ್ ಢಿಕ್ಕಿ: ಓರ್ವ ಮೃತ್ಯು

0
n3896336861653493763160432c943195122b7b1dc26c5873ce08e87b06fd8ce4090c0db19397e7ce9ab325.jpg

ಮಣಿಪಾಲ: ದ್ವಿಚಕ್ರ ವಾಹನವೊಂದು ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾಗಿ, ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.

ಮೃತರನ್ನು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಕೋಟೇಶ್ವರ ನಿವಾಸಿ ಶೋಧನ್ ಶೆಟ್ಟಿ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಆಡ್ರಿನ್ ವಾಸ್ ಎಂಬವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಂಡಿಕೇಟ್ ಸರ್ಕಲ್ ನಿಂದ ಉಡುಪಿ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ದ್ವಿಚಕ್ರ ವಾಹನ ಸವಾರನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡಿದ್ದಾನೆ. ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!