ಅಬುಧಾಬಿ: ಹೋಟೆಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಕಾಸರಗೋಡು ವ್ಯಕ್ತಿ ಮೃತ್ಯು
ಕಾಞಂಗಾಡ್: ಅಬುಧಾಬಿಯ ಹೋಟೆಲ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆಯಲ್ಲಿ ಕಾಞಂಗಾಡ್ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿಯನ್ನು ದನೇಶ್ ಎಂದು ಗುರುತಿಸಲಾಗಿದ್ದು, ಇವರು ಅವಿವಾಹಿತರಾಗಿದ್ದಾರೆ. ಹೋಟೆಲ್ ನಲ್ಲಿ ಆಹಾರ ಸೇವಿಸುತ್ತಿದ್ದ ಸಂದರ್ಭದಲ್ಲಿ ಸಿಲಿಂಡರ್ ಸ್ಫೋಟಗೊಂಡು ಈ ಅನಾಹುತ ನಡೆದಿದ್ದು, ಸ್ಫೋಟದಲ್ಲಿ ಶೇ.80ಕ್ಕೂ ಹೆಚ್ಚು ದೇಹ ಸುಟ್ಟುಹೋಗಿದೆ. ಅಬುಧಾಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.
ಸ್ಫೋಟದಲ್ಲಿ 120ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 60 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಸ್ಫೋಟಗಳು ಸಂಭವಿಸಿದ್ದು, ನಿನ್ನೆ ಮಧ್ಯಾಹ್ನ 12.45ರ ಸುಮಾರಿಗೆ ಮೊದಲ ಸ್ಫೋಟ ಸಂಭವಿಸಿದೆ.





