March 25, 2026

ಐಪಿಎಲ್ ಎಲಿಮಿನೇಟರ್ ಪಂದ್ಯಾಟ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಭರ್ಜರಿ ಗೆಲುವು

0
Royal-Challengers-Bangalore-5.jpg

ಕೋಲ್ಕತ್ತ: ರಜತ್ ಪಾಟಿದಾರ್ ಅಮೋಘ ಶತಕದ (112*) ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2022 ಟೂರ್ನಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ನಡೆದ ಪ್ಲೇ-ಆಫ್ ಹಂತದ ಎಲಿಮಿನೇಟರ್ ಪಂದ್ಯದಲ್ಲಿ 14 ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.

ಇದರೊಂದಿಗೆ ಐಪಿಎಲ್‌ನಲ್ಲಿ ಇದೇ ಮೊದಲ ಬಾರಿಗೆ ಆಡುತ್ತಿರುವ ಲಖನೌ ಸೂಪರ್ ಜೈಂಟ್ಸ್ ತಂಡದ ಟ್ರೋಫಿ ಕನಸು ಭಗ್ನಗೊಂಡಿದೆ. ನಾಯಕ ಕೆ.ಎಲ್ ರಾಹುಲ್ ಏಕಾಂಗಿ ಫಲ ನೀಡಲಿಲ್ಲ

ಅತ್ತ ಎರಡನೇ ಕ್ವಾಲಿಫೈಯರ್‌ಗೆ ಲಗ್ಗೆಯಿಟ್ಟಿರುವ ಫಫ್ ಡುಪ್ಲೆಸಿ ನೇತೃತ್ವದ ಆರ್‌ಸಿಬಿ, ಶುಕ್ರವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸವಾಲನ್ನು ಎದುರಿಸಲಿದೆ.

ಅಲ್ಲಿ ಗೆದ್ದ ತಂಡವು ಭಾನುವಾರ ಅಹಮದಾಬಾದ್‌ನಲ್ಲೇ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಟ್ರೋಫಿಗಾಗಿ ಸೆಣಸಲಿವೆ. ಇದರಲ್ಲಿ ಗೆದ್ದ ತಂಡ ಫೈನಲ್ ನಲ್ಲಿ ಗುಜರಾತ್ ವಿರುದ್ಧ ಸೆಣಸಾಡಲಿದೆ.

Leave a Reply

Your email address will not be published. Required fields are marked *

error: Content is protected !!