March 26, 2026

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ಪಕ್ಕದಲ್ಲೇ ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶ: ಕಾರ್ಮಿಕ ಮೃತ್ಯು

0
image_editor_output_image631741699-1653628472951.jpg

ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ಪಕ್ಕದಲ್ಲೇ ಹಾದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಷಗೊಂಡು ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನ ನರಿಮೊಗರು ಎಂಬಲ್ಲಿ ಗುರುವಾರ ನಡೆದಿದೆ.

ಮಾಡನ್ನೂರು ನಿವಾಸಿ ಮಲ್ಲ ಎಂಬವರ ಪುತ್ರ ವಸಂತ(35) ಮೃತಪಟ್ಟ ಕಾರ್ಮಿಕ. ಇವರು ಮರ ಕಡಿಯುವ ವೃತ್ತಿಯನ್ನು ಮಾಡುತ್ತಿದ್ದು, ನರಿಮೊಗರು ಐಟಿಐ ಸಮೀಪದಲ್ಲಿ ಕೆಲಸ ಮಾಡುತ್ತಿದ್ದರು.

ಮರವೊಂದನ್ನು ಕಡಿದು ಉರುಳಿಸುವ ವೇಳೆ ಮರ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿದ್ದ ವಸಂತರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರು ವಿವಾಹಿತರಾಗಿದ್ದು ಪತ್ನಿ, ಎರಡು ವರ್ಷದ ಗಂಡು ಹಾಗೂ 9 ತಿಂಗಳು ಪ್ರಾಯದ ಹೆಣ್ಣು ಮಗುವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!