ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರ ಸೇರಿ ಹಲವರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಕಾರ್ಯಕರ್ತರು
ಬೆಳಗಾವಿ: ಗಡಿಭಾಗ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡಾಟ ತೋರಿದೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕಾರಣಕ್ಕೆ ವಧು-ವರ ಸೇರಿ ಕನ್ನಡಿಗ ಯುವಕರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಬೆಳಗಾವಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ವರ ಸಿದ್ದು ಸೈಬಣ್ಣವರ್, ವಧು ರೇಷ್ಮಾ, ವರನ ತಮ್ಮ ಭರಮಾ ಸೇರಿ ಐವರ ಮೇಲೆ ಹಲ್ಲೆ ಮಾಡಲಾಗಿದೆ. ವಧು ವರ ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಆತನಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.





