March 26, 2026

ಮನೆಯಲ್ಲಿ ಸಿಲಿಂಡರ್ ಸ್ಫೋಟ: 3 ವರ್ಷದ ಮಗು ಸೇರಿದಂತೆ ನಾಲ್ವರು ಮೃತ್ಯು

0
image_editor_output_image-1834133285-1653715820909.jpg

ಹೈದರಾಬಾದ್: ಸಿಲಿಂಡರ್ ಸ್ಫೋಟಗೊಂಡು, ಮನೆಯ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂರು ವರ್ಷದ ಮಗು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಾನಪುರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಮತ್ತಿಬ್ಬರು ಬೆಂಕಿಯಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ (ಮೇ 28) ಅನಂತಪುರ್ ಜಿಲ್ಲೆಯ ಮುಲಕೇಡು ಗ್ರಾಮದ ಮನೆಯೊಂದರಲ್ಲಿ ಅಡುಗೆ ತಯಾರಿಸುತ್ತಿದ್ದ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತ್ತು.

ಸಿಲಿಂಡರ್ ಸ್ಫೋಟದ ತೀವ್ರತೆಗೆ ಸಮೀಪದ ಮನೆಗಳಿಗೂ ಹಾನಿಯಾಗಿರುವುದಾಗಿ ವರದಿ ವಿವರಿಸಿದೆ. ಸಿಲಿಂಡರ್ ಸ್ಫೋಟದ ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ವರದಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!