May 18, 2026

ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ದಾಳಿಯ ಬೆದರಿಕೆವೊಡ್ಡಿ ಹಣ ಸುಲಿಗೆ: ಮಾಜಿ ಪೊಲೀಸ್‌ ಸಿಬ್ಬಂದಿ ಸೇರಿ ಇಬ್ಬರ ಬಂಧನ

0
image_editor_output_image103621068-1653716795454.jpg

ಬೆಂಗಳೂರು: ಎಸಿಬಿ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳಿಗೆ ದಾಳಿಯ ಬೆದರಿಕೆಯೊಡ್ಡಿ ಹಣ ಸುಲಿಗೆ ಮಾಡುತ್ತಿದ್ದ ಮಾಜಿ ಪೊಲೀಸ್‌ ಸಿಬ್ಬಂದಿ ಸೇರಿ ಇಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ ಚಿಕ್ಕೋಡಿ ತಾಲೂಕಿನ ಮುರಿಗೆಪ್ಪಾ ನಿಂಗಪ್ಪ ಕುಂಬಾರ (56) ಮತ್ತು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಜನಿಕಾಂತ್‌ (46) ಬಂಧಿತರು. ಆರೋಪಿ ಗಳಿಂದ ಹತ್ತಾರು ಸಿಮ್‌ಕಾರ್ಡ್‌ಗಳು ಮತ್ತು ಮೊಬೈಲ್‌ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ತಿಳಿಸಿದೆ.

ಆರೋಪಿಗಳು ಇತ್ತೀಚೆಗೆ ಡಿವೈಎಸ್ಪಿ ಹೆಸರಿನಲ್ಲಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎಂ.ಧನಂಜಯ್‌ ಹಾಗೂ ಇಬ್ಬರು ಸಹೋದ್ಯೋಗಿಗಳಿಗೆ ಕರೆ ಮಾಡಿ, ರಾಜ್ಯದ ಕೆಲ ಜಿಲ್ಲೆಗಳ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿಮ್ಮ ಮೇಲೆ ದೂರು ನೀಡಿದ್ದಾರೆ.

ಈಗಾಗಲೇ ಪ್ರಕರಣ ದಾಖಲಿಸಿಕೊಂಡು, ಸಮೀಕ್ಷೆ ಮಾಡುತ್ತಿದ್ದೇವೆ. ಸದ್ಯದಲ್ಲೇ ನಿಮ್ಮ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಿದ್ದೇವೆ’ ಎಂದು ಬೆದರಿಸಿದ್ದರು.

Leave a Reply

Your email address will not be published. Required fields are marked *

error: Content is protected !!