March 26, 2026

ಮಾಣಿ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ: ಗಾಯಾಳು ಬೈಕ್ ಸವಾರ ಮೃತ್ಯು

0
image_editor_output_image-227567943-1653721926084

ಬಂಟ್ವಾಳ: ಬೈಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಮೇ.27 ರಂದು ಸಂಜೆ ನೇರಳಕಟ್ಟೆಯಲ್ಲಿ ನಡೆದಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಮೃತರನ್ನು ಕಬಕ ಸಮೀಪದ ಅರ್ಕ ನಿವಾಸಿ ಸೇಸಪ್ಪ ನಾಯ್ಕ್ ರ ಪುತ್ರ ಕಿಶೋರ್ (28) ಎನ್ನಲಾಗಿದೆ.

ಕಿಶೋರ್ ತಡರಾತ್ರಿ ಕಬಕದಿಂದ ತನ್ನ ಸ್ನೇಹಿತನನ್ನು ಕಲ್ಲಡ್ಕಕ್ಕೆ ಬಿಟ್ಟು ಹಿಂತಿರುಗುತ್ತಿದ್ದಾಗ ನೇರಳಕಟ್ಟೆ ಸಮೀಪ ಅಪಘಾತ ಸಂಭವಿಸಿದೆ.

ಅಪಘಾತದಿಂದಾಗಿ ತಲೆಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದ ಕಿಶೋರ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಬಂದಿದೆ.

Leave a Reply

Your email address will not be published. Required fields are marked *

error: Content is protected !!