ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲು
ಮಂಡ್ಯ: ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಉಲ್ಲಂಘಿಸಿದಂತ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ದಕ್ಷಿಣ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿತ್ತು. ಈ ವೇಳೆಯಲ್ಲಿಯೇ ಮೇ.16ರಂದು ಮಂಡ್ಯದ ಕೆಲ ಕಾಲೇಜುಗಳಲ್ಲಿ ಸಭೆ ನಡೆಸಿದ್ದಂತ ಸಚಿವ ಸಿಎನ್ ಅಶ್ವಥ್ ನಾರಾಯಣ ಅವರು, ನೀತಿ ಸಂಹಿತೆ ಉಲ್ಲಂಘಿಸಿದ್ದರು.
ಈ ಸಂಬಂಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್, ಸಚಿವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ, ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ್, ಬಿಜೆಪಿ ಅಭ್ಯರ್ಥಿ ಎಂ.ವಿ ರವಿಶಂಕರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.





