ಬಾಗಲಕೋಟೆ: ಟೋಪಿ ಧರಿಸಿದ್ದಕ್ಕೆ ವಿದ್ಯಾರ್ಥಿಗೆ ಹಲ್ಲೆ ಆರೋಪ: ಪ್ರಿನ್ಸಿಪಾಲ್, ಪೊಲೀಸ್ ಅಧಿಕಾರಿ ಸಹಿತ ಏಳು ಜನರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಕಾಲೇಜಿನೊಳಗೆ ಟೋಪಿ ಧರಿಸಿದ್ದಕ್ಕಾಗಿ ಪೊಲೀಸರು ಮತ್ತು ಅಧಿಕಾರಿಗಳು ಥಳಿಸಿದ್ದಾರೆ ಎಂದು 19 ವರ್ಷದ ವಿದ್ಯಾರ್ಥಿ ಆರೋಪಿಸಿದ್ದಾರೆ. ಈ ಸಂಬಂಧ ಸಬ್ ಇನ್ಸ್ ಪೆಕ್ಟರ್, ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಐವರು ಪೊಲೀಸರು ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ತೇರದಾಳ ಪ್ರಥಮ ದರ್ಜೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿ ನವೀದ್ ಹಸನಸಾಬ್ ಥರಾಠಾರಿ ಎಂಬುವವರ ಖಾಸಗಿ ದೂರಿನ ಮೇರೆಗೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆದೇಶದ ಮೇರೆಗೆ ಮೇ 24 ರಂದು ಪ್ರಕರಣ ದಾಖಲಿಸಲಾಗಿತ್ತು. ಸ್ಕಲ್ ಕ್ಯಾಪ್‌ಗಳ ಬಳಕೆಯನ್ನು ನಿರ್ಬಂಧಿಸಿ ಸರ್ಕಾರದಿಂದ ಯಾವುದೇ ಆದೇಶವಿಲ್ಲದಿದ್ದರೂ ಪ್ರಾಂಶುಪಾಲರು ಕಾಲೇಜಿಗೆ ಪ್ರವೇಶಿಸದಂತೆ ತಡೆದಿದ್ದಾರೆ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.
ಪ್ರಾಂಶುಪಾಲರು ಮತ್ತು ಪೊಲೀಸರು ಥಳಿಸಿ ಅವರ ನಂಬಿಕೆಗೆ ಅಪಮಾನ ಮಾಡಿದ್ದಾರೆ ಎಂದು ವಿದ್ಯಾರ್ಥಿ ಆರೋಪಿಸಿದ್ದಾರೆ. ಈಗ ಪೊಲೀಸರು ಈ ಘಟನೆಯ ವಿಚಾರವಾಗಿ ತನಿಖೆ ಆರಂಭಿಸಿದ್ದಾರೆ.