ಮಳಲಿ ಮಸೀದಿ ವಿವಾದ:
ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಮಸೀದಿ ಆಡಳಿತ ಮಂಡಳಿ ಜತೆ ಸಭೆ
ಮಂಗಳೂರು: ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಮಸೀದಿ ಆಡಳಿತ ಮಂಡಳಿ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಊರಿನ ಪ್ರಮುಖರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರಮುಖರ ಜೊತೆ ಸಭೆ ನಡೆಸಲಾಗಿದೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸಭೆಯಲ್ಲಿ ಮಸೀದಿ ಆಡಳಿತ ಮಂಡಳಿ ಜೊತೆ ಸಭೆ ನಡೆಸಿದ ಶಾಸಕ ಭರತ್ ಶೆಟ್ಟಿ ನಂತರ
ಹಿಂದೂ ಸಂಘಟನೆಗಳ ಪ್ರಮುಖರ ಜೊತೆ ಸಭೆ ನಡೆಸಿದ್ದಾರೆ. ಅನಂತರ ಮಸೀದಿ ಆಡಳಿತ ಮಂಡಳಿ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಊರಿನ ಪ್ರಮುಖರು, ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರಮುಖರ ಜೊತೆ ಜಂಟಿ ಸಭೆ ನಡೆಸಲಾಗಿದೆ.
ಸಭೆಯಲ್ಲಿ ತಮ್ಮ ತಮ್ಮ ನಿಲುವು ವ್ಯಕ್ತಪಡಿಸಿದ ಪ್ರಮುಖರು ಸೌಹಾರ್ದಯುತವಾಗಿ ವಿವಾದವನ್ನು ಬಗೆಹರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ.





