ಪುತ್ತೂರು: ಕಳ್ಳತನ ಪ್ರಕರಣ: 20 ವರ್ಷಗಳ ಬಳಿಕ ಆರೋಪಿಯ ಬಂಧನ
ಪುತ್ತೂರು: 20 ವರುಷಗಳ ಹಿಂದೆ ಅಂಗಡಿಯೊಂದರಿಂದ ದಿನಸಿ ಸಾಮಾಗ್ರಿ ಕಳ್ಳತನಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಪ್ರಸ್ತುತ ನೆಹರುನಗರದಲ್ಲಿ ವಾಸವಿರುವ ಚೆನ್ನಕೇಶವ ಎನ್ನಲಾಗಿದೆ.
ಪಡೀಲ್ ನಲ್ಲಿರುವ ದಾಮೋದರ ಗೌಡ ಎಂಬವರ ಅಂಗಡಿಯಿಂದ ದಿನಸಿ ಸಾಮಗ್ರಿ ಕಳ್ಳತನವಾಗಿದ್ದು, ಈ ಬಗ್ಗೆ ಅವರು ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈ ಮೊದಲೇ ಮೂವರನ್ನು ವಶಕ್ಕೆ ಪಡೆದು ನ್ಯಾಯಲಯಕ್ಕೆ ಹಾಜರು ಪಡಿಸಿದ್ದು, ಈ ವೇಳೆ ಆರೋಪಿ ತಲೆಮರೆಸಿಕೊಂಡಿದ್ದ, ಈ ಹಿನ್ನೆಲೆ ವಾರಂಟ್ ಜಾರಿಗೊಳಿಸಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಪೊಲೀಸರು ಬಂಧಿಸಿದ್ದಾರೆ.
ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರು , ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ ಮಂಗಳೂರು ಮತ್ತು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಂತೆ ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಸುನೀಲ್ ಕುಮಾರ್ ಮತ್ತು ಪೊಲೀಸ್ ಉಪನಿರೀಕ್ಷಕರುಗಳಾದ ರಾಜೇಶ್ , ನಸ್ರೀನ್ ತಾಜ್ ರವರ ಆದೇಶದಂತೆ ಪರಮೇಶ್ವರ ಮತ್ತು ಜಗದೀಶ್ ಮತ್ತು ಕೇಶವ ರವರು ದಸ್ತಗಿರಿ ಮಾಡಿದ್ದಾರೆ.





