March 27, 2026

ಬಿಕ್ಕರ್ನಕಟ್ಟೆಯಲ್ಲಿ ರಸ್ತೆ ಅಪಘಾತ: ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ಮೆದುಳು ನಿಷ್ಕ್ರಿಯ

0
image_editor_output_image-1687763826-1653973993783.jpg

ಮಂಗಳೂರು: ಬಿಕ್ಕರ್ನಕಟ್ಟೆಯಲ್ಲಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅಂಗಾಂಗ ದಾನ ಮಾಡುವುದಾಗಿ ಮೃತನ ಸಂಬಂಧಿಕರು ತಿಳಿಸಿದ್ದಾರೆ.

ಮೇ 29 ಭಾನುವಾರ ಮುಂಜಾನೆ ಘಟನೆ ನಡೆದಿದ್ದು, ಗಣೇಶ್ ಎಂಬಾತ ಧೀರಜ್ ನನ್ನು ಮನೆಗೆ ಬಿಟ್ಟು ಬರಲು ತೆರಳಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ನಿಂದ ರಸ್ತೆಗೆ ಬಿದ್ದ ಗಣೇಶ್ ಹಾಗೂ ಧೀರಜ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು.

ಇನ್ನು ನಸುಕಿನ ಜಾವ 2:30ರ ವೇಳೆಗೆ ಸೆಂಟ್ರಲ್ ರೈಲ್ವೇ ಸ್ಟೇಷನ್ ಗೆ ಬಾಡಿಗೆಗೆಂದು ತೆರಳುವ ಆಟೋ ಚಾಲಕ ಪ್ರವೀಣ್ ಕುಮಾರ್ ಇದನ್ನು ಗಮನಿಸಿ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಕೂಟರ್ ಸವಾರ ಗಣೇಶ್ ಅವರ ಅತಿವೇಗ ಮತ್ತು ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ನಗರದ ಸಂಚಾರಿ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!