March 27, 2026

ಮನೆಗೆ ಹಿಂದಿರುಗುತ್ತಿದ್ದ ಆ್ಯಂಬುಲೆನ್ಸ್ ಟ್ರಕ್ ಗೆ ಢಿಕ್ಕಿ: ಏಳು ಮಂದಿ ಮೃತ್ಯು

0
image_editor_output_image-2077961671-1653974595596.jpg

ಲಕ್ನೋ: ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಆ್ಯಂಬುಲೆನ್ಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಬೆಳಗ್ಗೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಒಂದೇ ಕುಟುಂಬದ ಆರು ಮಂದಿ ದೆಹಲಿಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆ್ಯಂಬುಲೆನ್ಸ್ ನಲ್ಲಿ ಪಿಲ್ಭಿಟ್ ಗೆ ವಾಪಸ್ ಆಗುತ್ತಿದ್ದ ವೇಳೆಯಲ್ಲಿ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.

ಅತಿಯಾದ ವೇಗದಿಂದಾಗಿ ಆ್ಯಂಬುಲೆನ್ಸ್ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಹೊಡೆದು ನಂತರ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!