ಪ್ರತಿಭಟನೆ ವೇಳೆ ಮಾಜಿ ಶಾಸಕನಿಂದ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ
ರಾಯಚೂರು: ಪ್ರತಿಭಟನೆ ವೇಳೆ ಮಾಜಿ ಶಾಸಕ ಎ.ಪಾಪಾರೆಡ್ಡಿ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದ್ದು, ಪೊಲೀಸ್ ವಲಯದ ಆಕ್ರೋಶಕ್ಕೆ ಕಾರಣವಾಗಿದೆ.
ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಇದಕ್ಕೆ ಅವಕಾಶ ನೀಡದ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.
ಪೊಲೀಸರು ಪ್ರತಿಕೃತಿ ತೆರವು ಮಾಡಲು ಮುಂದಾಗಿದ್ದಾರೆ. ಇದರಿಂದ ಕೋಪಗೊಂಡ ಮಾಜಿ ಶಾಸಕ ಎ ಪಾಪಾರೆಡ್ಡಿ ಪಶ್ಚಿಮ ಠಾಣೆ ಪೇದೆ ರಾಘವೇಂದ್ರ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಸ್ಥಿತಿ ಏರ್ಪಟ್ಟಿತ್ತು.