ಮಂಗಳೂರು: ಎಸ್ ಡಿ ಪಿ ಐ ಸಮಾವೇಶದ ವೇಳೆ ಪೊಲೀಸರಿಗೆ ನಿಂದನೆ ಪ್ರಕರಣ:
ಏಳು ಮಂದಿ ಆರೋಪಿಗಳ ಬಂಧನ
ಮಂಗಳೂರು: ಎಸ್.ಡಿ.ಪಿ.ಐ ಆಯೋಜಿಸಿದ್ದ ಸಭೆ ಗೆ ಆಗಮಿಸಿದ ಕಾರ್ಯಕರ್ತರು ಪೊಲೀಸರಿಗೆ ನಿಂದನೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಆರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.
ನೌಶಾದ್, ಹೈದರಾಲಿ ಬಂಧಿತ ಮುಖ್ಯ ಆರೋಪಿಗಳು. ಆರೋಪಿಗಳಿಗೆ ಆಶ್ರಯ ನೀಡಿದ ಇತರ ನಾಲ್ವರನ್ನು ಕೂಡ ಬಂಧಿಸಿದ್ದಾರೆ. ಮೇ.27 ರಂದು ಕಣ್ಣೂರಿನಲ್ಲಿ ನಡೆದಿದ್ದ ಸಮಾವೇಶಕ್ಕೆ ಬೈಕ್ ಮತ್ತು ಕಾರ್ ನಲ್ಲಿ ಬಂದ ಸವಾರ, ಸಹ ಸವಾರದಿಂದ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆಗಿದ್ದ ವಿಡಿಯೋ ವೈರಲ್ ಆಗಿತ್ತು.
ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಗೆ ಮೈಮೇಲೆ ಹಾಯಿಸುವಂತೆ ಬೈಕ್ ಸವಾರಿ ಕೂಡ ಮಾಡಿದಲ್ಲದೆ ಕರ್ತವ್ಯ ನಿರತ ಪೊಲೀಸರಿಗೆ ಅಡೆತಡೆಯುಂಟು ಮಾಡಿ ನಿಂದಿಸಿದ್ದರು ಎನ್ನಲಾಗಿದೆ. ಒಂದು ಬೈಕ್ ಹಾಗೂ ಕಾರಿನಲ್ಲಿ 11 ಜನರ ಗುಂಪು ಈ ಕೃತ್ಯದಲ್ಲಿ ಭಾಗವಹಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ವಿಡಿಯೋ ಆಧಾರದ ಮೇ.28 ರಂದು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಬೆಂಗಳೂರು ಮತ್ತು ಮೈಸೂರಿನಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಓರ್ವ ಬೆಂಗಳೂರಿನಲ್ಲಿ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತೋರ್ವ ಮೈಸೂರಿನಲ್ಲಿ ಜ್ಯೂಸ್ ಸೆಂಟರ್ ನಲ್ಲಿ ಕೆಲಸ ಮಾಡುತಿದ್ದ ಎಂದು ಕಮಿಷನರ್ ತಿಳಿಸಿದ್ದಾರೆ.