ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣಗಳಿಂದ ಪಕ್ಷ ತೊರೆಯುವುದಾಗಿ ತಿಳಿಸಿದ್ದಾರೆ.
ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಾಳಪ್ಪ ಅವರು ರಾಜೀನಾಮೆ ಪತ್ರವನ್ನು ಕಳಿಸಿದ್ದು, ಪಕ್ಷದಲ್ಲಿ ನನಗೆ ಹಲವು ಅವಕಾಶಗಳನ್ನು ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬರೆದಿದ್ದಾರೆ.
ರಾಜ್ಯ ವಿಧಾನ ಪರಿಷತ್ ಮತ್ತು ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳ ಘೋಷಣೆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು ಕುತೂಹಲ ಕೆರಳಿಸಿದೆ.